Chartered Accountant's day July 1
JUL 1 ಚಾರ್ಟರ್ಡ್ ಅಕೌಂಟೆಂಟ್ ಚಾರ್ಟರ್ಡ್ ಅಕೌಂಟೆಂಟರುಗಳ ದಿನ ಜುಲೈ 1ರ ದಿನ ‘ಚಾರ್ಟರ್ಡ್ ಅಕೌಂಟೆಂಟ್’ಗಳ ದಿನವೆಂದು ಪರಿಗಣಿತವಾಗಿದೆ. ಜುಲೈ 1, 1949ರಂದು ಸಂವಿಧಾನದಡಿಲ್ಲಿನ ಚಾರ್ಟರ್ಡ್ ಅಕೌಂಟೆಂಟ್ ಕಾಯಿದೆಯ ಪ್ರಕಾರ ‘ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ’ ಸಂಸ್ಥೆ ಅಸ್ತಿತ್ವಕ್ಕೆ ಬಂತು. ಈ ಸಂಸ್ಥೆಯು ‘ಐಸಿಎಐ(ICAI)’ ಎಂಬ ಕಿರುರೂಪದಿಂದ ಪ್ರಖ್ಯಾತವಾಗಿದೆ. ಚಾರ್ಟರ್ಡ್ ಅಕೌಂಟೆಂಟ್ಗಳು ವೃತ್ತಿಪರ ಸಾಂಸ್ಥಿಕ ಲೆಕ್ಕಪತ್ರ ನಿರ್ವಹಣೆ ಮತ್ತು ಲೆಕ್ಕ ಪರಿಶೋಧಕರಾಗಿ ಈ ಸಂಸ್ಥೆಯ ಮೂಲಕ ಪರಿಣತಿಯನ್ನು ಸಾಧಿಸಿರುತ್ತಾರೆ. ಈ ರೀತಿ ಪರಿಣತಿ ಸಾಧಿಸಿರುವ ಅತೀ ಹೆಚ್ಚು ಸದಸ್ಯತ್ವ ಸಂಖ್ಯೆ ಹೊಂದಿರುವ ದೃಷ್ಟಿಯಿಂದ ಈ ಐಸಿಎಐ ಸಂಸ್ಥೆಯು ‘ಅಮೆರಿಕನ್ ಇನ್ಸ್ಟಿಟ್ಯೂಟ್ ಆಫ್ ಸರ್ಟಿಫೈಡ್ ಪಬ್ಲಿಕ್ ಅಕೌಂಟೆಂಟ್ಸ್‘ ನಂತರದಲ್ಲಿ ವಿಶ್ವದ ತನ್ನ ಇತರ ಸಮಾನೋದ್ದೇಶಿತ ಸಂಸ್ಥೆಗಳ ಪಟ್ಟಿಯಲ್ಲಿ ಎರಡನೇ ಸ್ಥಾನ...